Tuesday, May 14, 2024
HomeElectric Vehicleದೇಶದ ಪ್ರಮುಖ ನಗರಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆ ಹೆಚ್ಚಳ : ಸಚಿವಾಲಯ

Related Posts

ದೇಶದ ಪ್ರಮುಖ ನಗರಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆ ಹೆಚ್ಚಳ : ಸಚಿವಾಲಯ

DTF News 

ಬೆಂಗಳೂರು, ಫೆ 20: ದೇಶದಲ್ಲಿ ಜನರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗುತ್ತಿದ್ದಂತೆ, ಚಾರ್ಜಿಂಗ್‌ ಸೌಕರ್ಯಗಳ ಬೇಡಿಕೆ ಕೂಡ ಬೆಳೆಯುತ್ತಿದೆ. ಇದಕ್ಕೆ ಸರ್ಕಾರ ಕೂಡ ಸಾಥ್‌ ನೀಡುತ್ತಿದೆ. ಕಳೆದ ನಾಲ್ಕು ತಿಂಗಳಲ್ಲಿ ಒಂಬತ್ತು ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆ  ಎರಡೂವರೆ ಪಟ್ಟು ಹೆಚ್ಚಾಗಿದೆ ಎಂದು ವಿದ್ಯುತ್ ಸಚಿವಾಲಯ ತಿಳಿಸಿದೆ.

ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಸೂರತ್, ಪುಣೆ, ಅಹಮದಾಬಾದ್, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ ಪ್ರಮುಖ ಮೆಟ್ರೋ ನಗರಗಳಲ್ಲಿ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳು ಅಳವಡಿಸಿಕೊಳ್ಳಲಿದೆ.

ಭಾರತದಲ್ಲಿ ಸುಮಾರು 1,640 ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳಿದ್ದು, ಈ ಪೈಕಿ 940 ಇವಿ ಚಾರ್ಜಿಂಗ್ ಕೇಂದ್ರಗಳು ಈ ನಗರಗಳಲ್ಲಿಯೇ ವ್ಯಾಪಿಸಿದೆ. ವಿದ್ಯುತ್ ಸಚಿವಾಲಯದ ಪ್ರಕಾರ, ಸರ್ಕಾರ ಈ ಒಂಬತ್ತು ನಗರಗಳಲ್ಲಿ 2021 ಅಕ್ಟೋಬರ್ ಮತ್ತು 2022ರ ಜನವರಿ ನಡುವೆ 678 ಸಾರ್ವಜನಿಕ ಎಲೆಕ್ಟ್ರಿಕ್‌ ವಾಹನ (EV) ಚಾರ್ಜಿಂಗ್ ಕೇಂದ್ರಗಳನ್ನು ಅಳವಡಿಸಿದೆ.

ವಿದ್ಯುತ್ ಸಚಿವಾಲಯ 2022ರ ಜನವರಿ 14 ರಂದು EV ಚಾರ್ಜಿಂಗ್ ಮೂಲಸೌಕರ್ಯಕ್ಕಾಗಿ ಪರಿಷ್ಕೃತ ಏಕೀಕೃತ ಮಾರ್ಗಸೂಚಿ ಮತ್ತು ಮಾನದಂಡಗಳನ್ನು ಬಿಡುಗಡೆ ಮಾಡಿತ್ತು.  ಅದರ ಪ್ರಕಾರ, ಅನೇಕ ಖಾಸಗಿ ಸಂಸ್ಥೆಗಳು ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಮುಂದೆ ಬಂದಿವೆ ಎಂದು ಸಚಿವಾಲಯ ಹೇಳಿದೆ

ಮುಂದಿನ ದಿನಗಳಲ್ಲಿ, ಕೇಂದ್ರವು ಹಂತ ಹಂತವಾಗಿ ಇತರ ನಗರಗಳಿಗೆ ವ್ಯಾಪ್ತಿಯನ್ನು ವಿಸ್ತರಿಸಲು ಯೋಜಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂನಂತಹ ತೈಲ ಮಾರುಕಟ್ಟೆ ಕಂಪನಿಗಳು ನಗರಗಳಲ್ಲಿ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ 22,000 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಘೋಷಿಸಿವೆ.

ಭಾರೀ ಕೈಗಾರಿಕೆ ಇಲಾಖೆಯು ಇತ್ತೀಚೆಗೆ 25 ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಿಗಾಗಿ 1,576 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳನ್ನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here

Latest Posts

error: Content is protected !!